TSK

TSK · ಯೋಬನು 13:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?

ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.

¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.