TSK

TSK · ಯೋಬನು 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.

ಆಹಾ, ದೇವರು ಬಾಯ್ದೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ!

ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.

ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.

¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?