TSK

TSK · ಯೋಬನು 2:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

¶ ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,

ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.

¶ ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.

¶ ಅದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು,

ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.

ಆಗ ನಾಮಾಥ್ಯನಾದ ಚೋಫರನು ಹೀಗೆಂದನು,

¶ ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,

ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.

ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.

¶ ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.

ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.

ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.

ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?

ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.