ಯೋಬನು 3:18
TSK
ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.
TSK
Treasury of Scripture Knowledge references in ಕನ್ನಡ IRV.
ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.
ಸಮಾಧಿಯನ್ನು, ‘ನೀನು, ನನ್ನ ತಂದೆ’ ಎಂದೂ ಹುಳವನ್ನು, ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ,
ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.
¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.