ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
TSK
TSK · ಯೋಬನು 22:21
Treasury of Scripture Knowledge references in ಕನ್ನಡ IRV.
ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.
¶ ‹“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.›
ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
¶ ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.
ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.