TSK

TSK · ಯೋಬನು 27:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.

ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.

ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.

ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.

ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.

ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.

ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,

ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?

ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?

ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.

ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.