TSK

TSK · ಯೋಬನು 30:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.

ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು.

ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.

ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.

¶ ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.

¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.