TSK

TSK · ಯೋಬನು 35:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.

ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.

ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನಾದ ದೇವರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು?

ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.