TSK

TSK · ಯೋಬನು 37:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು

ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.

ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.

ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು.

ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು?

ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.