ಯೋಬನು 15:7
TSK
ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ?
TSK
Treasury of Scripture Knowledge references in ಕನ್ನಡ IRV.
ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ?
ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.
ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.
ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,