¶ ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
TSK
TSK · ಯೋಬನು 39:11
Treasury of Scripture Knowledge references in ಕನ್ನಡ IRV.
ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.
ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.