ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?
TSK
TSK · ಯೋಬನು 40:2
Treasury of Scripture Knowledge references in ಕನ್ನಡ IRV.
ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ?
ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.
ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?
ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.
ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!
ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.
ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ.
ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.
‹ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,›
“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?