TSK

TSK · ಯೋಬನು 7:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.

ಜ್ವಾಲೆಗಳು ಮೇಲಕ್ಕೆ ಹಾರುವುದು, ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ.

ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.

“ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.

ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.

“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.

¶ ‹“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.›