TSK

TSK · ಯೋಬನು 7:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.

ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.

ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.

“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.