2 ಸಮುವೇಲನು 12:23
TSK
ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
TSK
Treasury of Scripture Knowledge references in ಕನ್ನಡ IRV.
ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.
ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.
ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”
ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು.
ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.