TSK

TSK · ಯೋಬನು 9:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?

ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?

ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.

ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.

ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.