TSK

TSK · ಯೋಬನು 9:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.

ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.

ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.