ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,
TSK
TSK · ಯೋವೇಲ 1:14
Treasury of Scripture Knowledge references in ಕನ್ನಡ IRV.
ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.
ನೆಹೆಮಿಯ 9:2
TSK
ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.
ಯೆರೆಮಿಯ 36:9
TSK
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
ಯೋನ 3:8
TSK
ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.