TSK

TSK · ಯೋವೇಲ 1:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.

ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.

ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.

ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.

ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”

ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.

ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

¶ ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,

¶ ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:

¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?

‹ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಅಂದನು.

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಯಾವನು ಜಯಹೊಂದುತ್ತಾನೋ ಅವನಿಗೆ›‹ದೇವರ ಪರದೈಸಿನಲ್ಲಿರುವ›‹ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.›