TSK

TSK · ಯೋವೇಲ 1:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.

ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.

ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.

ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›

¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.