TSK

TSK · ಯೋವೇಲ 1:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.

ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”

ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.

ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.