TSK

TSK · ಯೋವೇಲ 2:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.

ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.

¶ ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.

ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.

ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

¶ ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.

ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!

ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”

ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’

ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.

ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!

ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.

ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.

ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.

ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.

ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.

ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”

¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.