TSK

TSK · ಯೋವೇಲ 2:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.

ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.

ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.

ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.

ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.

ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.

ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.

“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.

‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›