ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.
TSK
TSK · ಯೋವೇಲ 2:22
Treasury of Scripture Knowledge references in ಕನ್ನಡ IRV.
ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.
ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.
ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.
ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.
ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.
“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.