¶ ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
TSK
TSK · ಯೋಹಾನನು 1:10
Treasury of Scripture Knowledge references in ಕನ್ನಡ IRV.
¶ ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.
ಅದಕ್ಕೆ ಯೇಸು ಅವರಿಗೆ, ‹“ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ”› ಎಂದು ಹೇಳಿದನು.
ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.
¶ ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.