ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.
TSK
TSK · ಯೋಹಾನನು 1:15
Treasury of Scripture Knowledge references in ಕನ್ನಡ IRV.
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
¶ ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.
ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.
ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
‹ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.›
‹ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,›‹ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.›
ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
ಅದು, ‹“ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು”› ಎಂದು ನುಡಿಯಿತು.
¶ ‹“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು,›‹ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ›‹ಹೇಳುವುದೇನಂದರೆ,›