TSK

TSK · ಯೋಹಾನನು 1:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.

¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.

ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.

ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.

¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು

ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.

¶ ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.

ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.

ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

‹ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ”› ಅಂದನು.

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

‹ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.›

ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.

¶ ‹“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.›

¶ ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.

ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.

ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.