TSK

TSK · ಯೋಹಾನನು 1:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.

ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.

‹ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.›

‹ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.›

ಆಗ; ‹“ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು”› ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.