TSK

TSK · ಯೋಹಾನನು 1:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.

ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.

‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.