TSK

TSK · ಯೋಹಾನನು 1:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಯೇಸು ಅವರಿಗೆ ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.›

‹ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.›

¶ ‹“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.›

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.