TSK

TSK · ಯೋಹಾನನು 10:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

¶ ‹“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.›

‹ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.›

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

‹ನಾನು ನಿನ್ನ ಸಂಕಟವನ್ನೂ›‹ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ›‹ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ›‹ಸಭಾಮಂದಿರದವರಾಗಿದ್ದಾರೆ.›

‹ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.›

‹ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ›‹ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.›