ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
TSK
TSK · ಯೋಹಾನನು 10:18
Treasury of Scripture Knowledge references in ಕನ್ನಡ IRV.
‹ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?›
¶ ‹“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.›
¶ ‹“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.›
‹ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.›
‹ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.›
ಅದಕ್ಕೆ ಯೇಸು, ‹“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”› ಎಂದು ಉತ್ತರ ಕೊಟ್ಟನು.
ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.
ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ.