TSK

TSK · ಯೋಹಾನನು 10:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.

ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.

ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

‹ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.›

‹ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.›

ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.

¶ ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.

ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

‹ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ›‹ದೂತರು, ಆ ಏಳು ದೀಪಸ್ತಂಭಗಳು ಅಂದರೆ›‹ಆ ಏಳು ಸಭೆಗಳು.” ›