ಯೋಹಾನನು 6:37
TSK
‹ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.›
TSK
Treasury of Scripture Knowledge references in ಕನ್ನಡ IRV.
‹ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.›
ಆತನು ‹“ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,”› ಎಂದನು.
‹ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.›
¶ ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.