TSK

TSK · ಯೋಹಾನನು 10:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.

¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.

‹ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.›

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›

¶ “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.