¶ ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
TSK
TSK · ಯೋಹಾನನು 10:35
Treasury of Scripture Knowledge references in ಕನ್ನಡ IRV.
¶ ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.
ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.
ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.
“ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.
ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,
‹ನಿಮಗೆ ಸತ್ಯವಾಗಿ ಹೇಳುತ್ತೇನೆ,›‹ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.›
‹ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?›
‹ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.›
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
¶ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, ‹“ನನಗೆ ನೀರಡಿಕೆಯಾಗಿದೆ”› ಎಂದನು.
“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.