ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;
TSK
TSK · ಯೋಹಾನನು 10:4
Treasury of Scripture Knowledge references in ಕನ್ನಡ IRV.
ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.
ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
‹ಇದಲ್ಲದೆ›‹ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ›‹ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.›
‹ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.›
ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, ‹“ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ”› ಎಂದು ಉತ್ತರಕೊಟ್ಟನು.
¶ ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.
ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.
ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.