TSK

TSK · ಯೋಹಾನನು 10:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,

¶ ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.