¶ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”
TSK
TSK · ಯೋಹಾನನು 11:28
Treasury of Scripture Knowledge references in ಕನ್ನಡ IRV.
ಆಗ ಯೇಸು ನಿಂತು, ‹“ಅವನನ್ನು ಕರೆಯಿರಿ”› ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
¶ ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,
‹ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.›
‹ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.›
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.