ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.
TSK
TSK · ಯೋಹಾನನು 11:35
Treasury of Scripture Knowledge references in ಕನ್ನಡ IRV.
ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.