ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
TSK
TSK · ಯೋಹಾನನು 11:47
Treasury of Scripture Knowledge references in ಕನ್ನಡ IRV.
¶ ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು
¶ ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
¶ ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.