TSK

TSK · ಯೋಹಾನನು 11:48

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

‹ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?”› ಅಂದನು.

‹ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.›

‹ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.›

¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,

ಯೇಸು ಅವರ ಕಡೆಗೆ ತಿರುಗಿಕೊಂಡು, ‹“ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.›

“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.