TSK

TSK · ಯೋಹಾನನು 11:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.

¶ ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.

ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.