¶ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
TSK
TSK · ಯೋಹಾನನು 12:16
Treasury of Scripture Knowledge references in ಕನ್ನಡ IRV.
¶ ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
¶ ಯೇಸು ಅವರಿಗೆ, ‹“ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,›
ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
ಆಗ ಯೇಸು ಅವರಿಗೆ, ‹“ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.›
‹ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.›
‹ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,›‹ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.›
¶ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
¶ ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.