TSK

TSK · ಯೋಹಾನನು 12:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ

ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.

ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,

ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

¶ ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.

ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.

ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.