TSK

TSK · ಯೋಹಾನನು 13:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಊಟಮಾಡುತ್ತಿರುವಾಗ ಆತನು, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು”› ಅಂದನು.

ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, ‹“ನಿನ್ನ ಕೈ ಚಾಚು”› ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.

¶ ‹“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.›

‹ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?›

‹ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ›‹ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.›

¶ ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.

¶ ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.