ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.
TSK
TSK · ಯೋಹಾನನು 13:23
Treasury of Scripture Knowledge references in ಕನ್ನಡ IRV.
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
¶ ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.