“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
TSK
TSK · ಯೋಹಾನನು 13:5
Treasury of Scripture Knowledge references in ಕನ್ನಡ IRV.
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
¶ ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, ‹“ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ”› ಎಂದನು.
¶ ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, ‹“ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?›
ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,