ಯೇಸು ಅವರಿಗೆ ಪ್ರತ್ಯುತ್ತರವಾಗಿ, ‹“ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;›
TSK
TSK · ಯೋಹಾನನು 14:11
Treasury of Scripture Knowledge references in ಕನ್ನಡ IRV.
‹ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.›
ಯೇಸು ಅವರಿಗೆ, ‹“ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?”› ಎಂದು ಕೇಳಿದ್ದಕ್ಕೆ,
ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.