TSK

TSK · ಯೋಹಾನನು 14:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.

¶ ‹“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.›

‹ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ›‹ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.›

‹ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.›

‹ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.›

¶ ‹“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.›

ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.

ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

¶ ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.

ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.